ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!
ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ. ಅಧ್ಯಯನವೊಂದರ ನಿಮಿತ್ತ ನಾಸಾ ಸಂಸ್ಥೆ ನಿದ್ರೆ ಮಾಡುವವರಿಗಾಗಿ ಶೋಧ ನಡೆಸುತ್ತಿದ್ದು, ಕೇವಲ 60 ದಿನ ನಿದ್ರೆ ಮಾಡಿದರೆ 13 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದೆ.
ಇಷ್ಟಕ್ಕೂ ಏನಿದು ಅಧ್ಯಯನ?
ಅಮೆರಿಕದ ನಾಸಾ ಸಂಸ್ಥೆ ಮಂಗಳ ಹಾಗೂ ಚಂದ್ರನಲ್ಲಿಗೆ ಮಾನವ ಸಹಿತ ಉಡಾವಣೆ ಯೋಜನೆ ಹಮ್ಮಿಕೊಂಡಿದ್ದು, ಇದರ ನಿಮಿತ್ತ ಹಲವು ಅಧ್ಯಯನಗಳನ್ನು ಕೈಗೊಂಡಿದೆ. ಅದರಂತೆ ಗುರುತ್ವಾಕರ್ಷಣೆಯಲ್ಲಿದ ಬಾಹ್ಯಾಕಾಶ ವಾತಾವರಣದಲ್ಲಿ ನಿದ್ರೆ ಮತ್ತು ಇತರೆ ಆರೋಗ್ಯ ಸಂಬಂಧಿ ವ್ಯತ್ಯಾಸಗಳನ್ನು ಕಂಡು ಹಿಡಿಯಲು ವಿಜ್ಞಾನಿಗಳು ಈ ಅಧ್ಯಯನ ನಡೆಸುತ್ತಿದ್ದಾರೆ. ಅಮೇರಿಕನ್ ಸ್ಪೇಸ್ ಏಜೆನ್ಸಿ ನಾಸಾ ಮತ್ತು ಯುರೋಪಿಯನ್ ಸ್ಪೇಸ್ ಏಜೆನ್ಸಿ (ಇಎಸ್ಎ) ಜೊತೆ ಸೇರಿ ಕೃತಕ ಗುರುತ್ವದಲ್ಲಿ ನಿದ್ರೆ ಮಾಡುವ ಬಗ್ಗೆ ಸಂಶೋಧನೆ ನಡೆಸಲು ಮುಂದಾಗಿವೆ. ಇದಕ್ಕಾಗಿ ಕೃತಕ ಗುರುತ್ವಾಕರ್ಷಣೆಯಲ್ಲಿ 2 ತಿಂಗಳ ಕಾಲ ನಿದ್ರೆ ಮಾಡುವ ಜನರನ್ನು ನಾಸಾ ಹುಡುಕುತ್ತಿದೆ.
ಮೂಲಗಳ ಪ್ರಕಾರ ಈ ಸಂಶೋಧನೆಗೆ ನಾಸಾಗೆ 12 ಪುರುಷರು ಹಾಗೂ 12 ಮಹಿಳೆಯರ ಅವಶ್ಯಕತೆಯಿದೆ. ಅವರ ವಯಸ್ಸು 24ರಿಂದ 55 ವರ್ಷದೊಳಗಿರಬೇಕು ಎಂದು ತಿಳಿದುಬಂದಿದೆ. ಅಂತೆಯೇ ಈ ಕೆಲಸಕ್ಕೆ ನಾಸಾ, 12.81 ಲಕ್ಷ ರೂಪಾಯಿ ವೇತನ ಕೂಡ ನೀಡಲಿದೆ. ಜರ್ಮನ್ ಏರೋಸ್ಪೇಸ್ ಸೆಂಟರ್ ನಲ್ಲಿ ಈ ಸಂಶೋಧನೆ ನಡೆಯಲಿದ್ದು, ಈ ಸಂಶೋಧನೆಯಲ್ಲಿ ನಿದ್ರೆ ಜೊತೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲಾಗುವುದು. ಈ ಅಧ್ಯಯನದ ವೇಳೆ ಪ್ರಯೋಗ, ಆಹಾರ ಇತ್ಯಾದಿಗಳ ಮೇಲೆ ವಿಜ್ಞಾನಿಗಳು ಗಮನ ಕೇಂದ್ರೀಕರಿಸಲಿದ್ದಾರೆ.
ಈ ಹಿಂದೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಕೆಲಸ ಮಾಡಿ ಬಂದ ಸಾಕಷ್ಟು ಬಾಹ್ಯಾಕಾಶ ವಿಜ್ಞಾನಿಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಮೂಳೆಯ ಸಮಾರ್ಥ್ಯ ಕುಂಠಿತ, ಹೃದಯದ ಮೇಲಿನ ಒತ್ತಡದಂತಹ ಸಮಸ್ಯೆಗಳು ಕಂಡುಬಂದಿದ್ದವು. ಇಂತಹ ಸಮಸ್ಯೆಗಳು ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲೆಂದೇ ನಾಸಾ ಈ ಅಧ್ಯಯನ ನಡೆಸುತ್ತಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!