ಸುದ್ದಿ

ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

22

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.


ಪುಲ್ವಾಮಾ ಜಿಲ್ಲೆಯ ಡೆಲಿಪೊರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಬೆಳಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿ ಗುಂಡಿನ ದಾಳಿ ನಡೆಸಿದ್ದಾರೆ.ಕಾರ್ಯಾಚರಣೆ ವೇಳೆ ಸೆಪೊಯ್ ಸಂದೀಪ್ ಎಂಬ ಯೋಧ ಹುತಾತ್ಮನಾಗಿದ್ದು, ರಾಯೇಸ್ ಡಾರ್ ಎಂಬ ಸ್ಥಳೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.


ಶೂಪಿಯಾನ್ ನಲ್ಲಿ ಶೋಧ ಕಾರ್ಯಾಚರವಣೆ ವೇಳೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆಯಲ್ಲಿ ಸೆಪೊಯ್ ರೊಹಿತ್ ಎಂಬ ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ