ಸಿನಿಮಾ, ಸುದ್ದಿ

ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

47

ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ.

ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಪ್ರತಿ ವರ್ಷವೂ ಕೂಡ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿ ಮಾಡುತ್ತೇನೆ. ಈ ವರ್ಷ ನನಗೆ ಕೇಕ್ ತಯಾರಿಸಲು ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಐರಾ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಯಶ್ ರವರಿಗೆ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ