inspirational, ಸಿನಿಮಾ

ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

1150

ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು ಒಂದು ಹೆಣ್ಣು ಮಗು ಇದೆ ಶ್ರೀಧರ್ ಮಾದರಿಯಲ್ಲೆ ಹೆಂಡತಿ ಕೂಡ ಪ್ರಸಿದ್ಧ ಕಲಾವಿದೆ ಇವರಿಬ್ಬರು ವಿದ್ಯೆ ಮಗಳಿಗೂ ಕೂಡ ಬಂದಿದೆ.


ಶ್ರೀಧರ್ ದಂಪತಿಗೆ ಸೀನಿಯರ್ ಡಾನ್ಸರ್ ಪ್ರಶಸ್ತಿ ಅಮೃತ ಘಳಿಗೆ’ ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ ‘ಸೀನಿಯರ್ ಡಾನ್ಸರ್’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲ್ಯದಿಂದಲೇ ನೃತ್ಯದ ಗೀಳನ್ನು ಬೆಳೆಸಿಕೊಂಡಿದ್ದ ಶ್ರೀಧರ್ ಅವರಿಗೆ 1982ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ‘ಶ್ರೇಷ್ಠ ನೃತ್ಯಪಟು’ ಪ್ರಶಸ್ತಿ ನೀಡಿತ್ತು. ಶ್ರೀಧರ್ ಅವರ ನೃತ್ಯ ಮತ್ತು ಅಭಿನಯ ಸಾಮರ್ಥ್ಯವನ್ನು ಗಮನಿಸಿದ ಖ್ಯಾತ ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ‘ಅಮೃತ ಘಳಿಗೆ’ ಚಿತ್ರಕ್ಕಾಗಿ ಶ್ರೀಧರ್ ಅವರನ್ನು ಎಳೆತಂದಿದ್ದರು.

ನಂತರ ಸುಂದರ ಸ್ವಪ್ನಗಳು, ಬಣ್ಣದ ವೇಷ, ಶಬರಿಮಲೆ ಸ್ವಾಮಿ ಅಯ್ಯಪ್ಪ, ಮೌನ ಗೀತೆ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಆಸ್ಫೋಟ, ಬೊಂಬಾಟ್ ಹೆಂಡ್ತಿ, ಸಂತ ಶಿಶುನಾಳ ಷರೀಫ ಸಾಹೇಬ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಶಿಶುನಾಳ ಚಿತ್ರಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಒಲಿದುಬಂದಿತು. ಕನ್ನಡ ಚಿತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿಯೂ ಶ್ರೀಧರ್ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಶ್ರೀಧರ್ ಮತ್ತು ಅನುರಾಧ ದಂಪತಿಗಳು ಕರ್ನಾಟಕ, ಭಾರತದೆಲ್ಲೆಡೆ ಮತ್ತು ವಿಶ್ವದಾದ್ಯಂತ ನೃತ್ಯ ಪ್ರದರ್ಶನಗಳನ್ನು ನೀಡಿದ್ದಾರೆ. ನೃತ್ಯ ಮತ್ತು ಅಭಿನಯ ಕ್ಷೇತ್ರದಲ್ಲಿ ಅವರ ಮೂರು ದಶಕಗಳ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ 2002ರಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿತ್ತು. 2008ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಶ್ರೀಧರ್ ಮತ್ತು ಅನುರಾಧ ಅವರನ್ನು ಪ್ರಶಸ್ತಿ ನೀಡಿ ಗೌರವಿಸಿತ್ತು.

ಚಲನಚಿತ್ರ ಕಲಾವಿದರಾದ ಶ್ರೀಧರ್ ಮತ್ತು ಅನುರಾಧ ದಂಪತಿ ಪುತ್ರಿ ನೃತ್ಯದಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಪೋಷಕರಿಗೆ ಕೀರ್ತಿ ತಂದಿದ್ದಾರೆ. ಮನಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿ ಇರುವ ಅನಘಳಿಗೆ ಆ ವಿಷಯದಲ್ಲಿ ನೂರಕ್ಕೆ ನೂರು ಬಂದಿದ್ದು ಬಹಳ ಸಂತಸ ತಂದಿದೆ. ಈಗಾಗಲೇ ದೇಶ ಮತ್ತು ವಿದೇಶದಲ್ಲಿ ನೃತ್ಯ ಪ್ರದರ್ಶನ ನೀಡಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಪರಿಷತ್‌ನ (ಎನ್‌ಸಿಇಆರ್‌ಟಿ) ಸ್ಕಾಲರ್‌ಶಿಪ್‌ನ್ನು ಸಹ ಪಡೆಯುತ್ತಿದ್ದಾರೆ. ಪೋಷಕರ ಜೊತೆಗೆ ಇಂಗ್ಲೆಂಡ್‌, ಫ್ರಾನ್ಸ್‌ನಲ್ಲೂ ಅನಘ ಗೌರಿ ನೃತ್ಯ ಪ್ರದರ್ಶ‌ನ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…