ಸಿನಿಮಾ, ಸುದ್ದಿ

ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

77

ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ.

ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಓ ಮೈ ಗಾಡ್! ಹೋಟೆಲ್ ನಿಂದ ನಾನು ಹೊರಬಂದ ಕೆಲವೇ ಸಮಯದಲ್ಲಿ ಸ್ಪೋಟ ಸಂಭವಿಸಿದೆ. ನನಗೆ ನಂಬಲು ಆಗುತ್ತಿಲ್ಲ ಎಂದು ಆತಂಕ ಹೊರ ಹಾಕಿದ್ದಾರೆ.

ಅವರ ಪತಿ, ನಟ ಶರತ್ ಕುಮಾರ್, ಕೊಲಂಬೋದಲ್ಲಿ ನಡೆದ ಭಯೋತ್ಪಾದಕ ದಾಳಿಯ ಕೃತ್ಯವನ್ನು ಖಂಡಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಅಮಾಯಕರಿಗಾಗಿ ನನ್ನ ಹೃದಯ ಮಿಡಿದಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ