ಸಿನಿಮಾ, ಸುದ್ದಿ

ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

77

ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ.

ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಓ ಮೈ ಗಾಡ್! ಹೋಟೆಲ್ ನಿಂದ ನಾನು ಹೊರಬಂದ ಕೆಲವೇ ಸಮಯದಲ್ಲಿ ಸ್ಪೋಟ ಸಂಭವಿಸಿದೆ. ನನಗೆ ನಂಬಲು ಆಗುತ್ತಿಲ್ಲ ಎಂದು ಆತಂಕ ಹೊರ ಹಾಕಿದ್ದಾರೆ.

ಅವರ ಪತಿ, ನಟ ಶರತ್ ಕುಮಾರ್, ಕೊಲಂಬೋದಲ್ಲಿ ನಡೆದ ಭಯೋತ್ಪಾದಕ ದಾಳಿಯ ಕೃತ್ಯವನ್ನು ಖಂಡಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಅಮಾಯಕರಿಗಾಗಿ ನನ್ನ ಹೃದಯ ಮಿಡಿದಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…