ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು ಹೇಳಲಾಗಿದೆ.