ದೇಗುಲ ದರ್ಶನ

ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

203

ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ ಮಾಯವಾಗುತ್ತೆ ಮತ್ತು ಪ್ರತ್ಯಕ್ಷವಾಗುತ್ತದೆ.

ಗುಜರಾತಿನ ವಡೋದರ ಬಳಿಯಿರುವ ಕವಿಕಂಬೋಯ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರದಲ್ಲಿ ನಿರ್ಮಿಸಿರುವ ಆಲಯದಲ್ಲಿ ಸ್ತಂಭೇಶ್ವರನಾಗಿ ಆ ಪರಮಶಿವನು ನೆಲೆಸಿದ್ದಾನೆ. ಈ ದೇವಾಲಯ ಬಹಳ ಪುರಾತನವಾದದ್ದು ಎಂದು ಇತಿಹಾಸಕಾರರು ಹೇಳುತ್ತಾರೆ. ಸಹಸ್ರಾರು ಶತಮಾನಗಳ ಹಿಂದೆ ಕಾರ್ತಿಕೇಯ ಸ್ವಾಮಿಯೇ ಇದನ್ನು ನಿರ್ಮಿಸಿದ್ದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆಗ ತಾರಕಾಸುರನನ್ನು ವಧಿಸಿದ ಸಮಯದಲ್ಲಿ ನಿರ್ಮಿಸಲಾದ ಈ ದೇವಾಲಯ ಸಮುದ್ರದಲ್ಲಿ ಮುಳುಗಿದ್ದು, 150 ವರ್ಷಗಳ ಹಿಂದೆ ಕಾಣಿಸಿಕೊಂಡಿತಂತೆ. ಆದರೂ ಸಹ ಇಂದಿಗೂ ಆ ದೇವಾಲಯ ದಿನವೂ ಸಮುದ್ರದಲ್ಲಿ ಮುಳುಗಿ ಮಾರನೇ ದಿನ ಮತ್ತೆ ಪ್ರತ್ಯಕ್ಷವಾಗುತ್ತದೆಯಂತೆ.

ನಾಲ್ಕು ಅಡಿ ಎತ್ತರವಿರುವ ಈ ಶಿವಲಿಂಗ ತಮ್ಮ ಕೋರಿಕೆಗಳನ್ನ ಈಡೇರಿಸುತ್ತಾನೆ ಎಂದು ಭಕ್ತಕೋಟಿ ನಂಬುತ್ತಾರೆ.ಈ ದೇವಾಲಯದ ದರ್ಶನ ಪಡೆಯಬೇಕೆಂದರೆ ಭಕ್ತರು ಬೆಳಿಗ್ಗೆ ಬರಬೇಕು ಮಧ್ಯಾಹ್ನದವರೆಗೆ ದರ್ಶನ ಮಾಡಿಕೊಂಡು ಪೂಜೆ ಮಾಡಿಕೊಂಡು ತದನಂತರ ಹಿಂದಿರುಗಲೇ ಬೇಕು.
ಏಕೆಂದರೆ ಆಗ ಆ ದೇವಾಲಯ ಸಮುದ್ರದಲ್ಲಿ ಮುಳುಗಿ ಹೋಗುತ್ತದೆ. ಆದರೆ ಈ ಆಲಯಕ್ಕೆ ಈ ವಿಶೇಷತೆ ಅಲ್ಲದೆ ಇನ್ನೊಂದು ವಿಶೇಷತೆ ಕೂಡ ಇದೆ.ಈ ದೇವಾಲಯ ಇರುವ ಸ್ಥಳದಲ್ಲಿ ಚೋಟೆ ಮಹೆ ಸಾಗರ್, ಸಬರಮತಿ ಎಂಬ ಎರಡು ನದಿಗಳ ಸಂಗಮವಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…