ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ, ಪಟ್ಟಣ ಪ್ರದೇಶಗಳಿಗೆ ಹೋಗಿರುವವರು ತಮ್ಮ ರೇಷನ್ ಕಾರ್ಡ್ ಸ್ಟೇಟಸ್ ಏನಿದೆ ಎಂಬುದರ ಮಾಹಿತಿ ಪಡೆಯಬಹುದು.
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
https://ahara.kar.nic.in/WebForms/Show_RationCard.aspx
ರೇಶನ್ ಕಾರ್ಡ್ ಸ್ಟೇಟಸ್ ಮೇಲೆ ಚೆಕ್ ಮಾಡಲು ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಪಡಿತರ ಚೀಟಿ ತೋರಿಸು ಮೇಲೆ ಕ್ಲಿಕ್ ಮಾಡಬೇಕು.ನಂತರ ಓಪನ್ ಆಗುವ ಪೇಜ್ ನಲ್ಲಿ ನಿಮ್ಮ ರೇಶನ್ ಕಾರ್ಡ್ ನಂಬರ್ ಹಾಕಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಸದಸ್ಯರನ್ನು ಆಯ್ಕೆ ಮಾಡಿ ಬಾಕ್ಸ್ ಕಾಣಿಸುತ್ತದೆ. ಅಲ್ಲಿ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಆ ರೇಶನ್ ಕಾರ್ಡ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದು ಕಾಣಿಸುತ್ತದೆ. ನಿಮ್ಮ ಹೆಸರು ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ನಂತರ ಓಟಿಪಿ ಮೂಲಕ ಸ್ಟೇಟಸ್ ಚೆಕ್ ಮಾಡಬಹುದು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ನಮೂದಿಸಿ ನಿಮ್ಮ ರೇಶನ್ ಕಾರ್ಡನ್ನು ಓಪನ್ ಮಾಡಬಹುದು