ಸುದ್ದಿ

ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

179

ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ.


ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ದೊಡ್ಡ ಪ್ರಮಾದಕಂಡುಬಂದಿತ್ತು.

ಮೊದಲವರ್ಷದ ಪರೀಕ್ಷೆಯಲ್ಲಿ ಶೇ.90 ರಷ್ಟು ಅಂಕ ಗಳಿಸಿದ್ದ ವಿದ್ಯಾರ್ಥಿಗಳು ಎರಡನೇ ವರ್ಷದಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ವಿವಿಧ ವಿಷಯಗಳಲ್ಲಿ ಕೇವಲ ಸೊನ್ನೆ, ಒಂದು ಹಾಗೂ ಎರಡುಅಂಕಗಳನ್ನು ಮಾತ್ರ ಕೊಡಲಾಗಿದೆ ಎಂದು ಸಾಕಷ್ಟು ದೂರುಗಳನ್ನು ವಿದ್ಯಾರ್ಥಿಗಳು ಸಲ್ಲಿಸಿದ್ದರು.ಈರೀತಿಯ ಪ್ರಕರಣಗಳಿಂದ ಇನ್ನುಳಿದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಲ್ಲಿ ತಳಮಳ ಉಂಟುಮಾಡಿದೆ.ಪರೀಕ್ಷೆಯಲ್ಲಿ ಫೇಲ್​ ಆಗುವುದರಿಂದ ಜೀವನವೇ ಮುಗಿದುಹೋಯಿತು ಎಂಬುದಕ್ಕೆ ಅರ್ಥವಿಲ್ಲ. ಹೀಗಾಗಿವಿದ್ಯಾರ್ಥಿಗಳ ಆತ್ಮಹತ್ಯೆಯ ಯೋಚನೆ ಮಾಡಬೇಡಿ ಎಂದು ಕೆಸಿಆರ್​ ಮನವಿ ಮಾಡಿಕೊಂಡಿದ್ದಾರೆ.

ಈ ವರ್ಷ 4,09,133 ವಿದ್ಯಾರ್ಥಿಗಳು ನಿಯಮಿತ ಪದ್ದತಿಯಂತೆ ಮೊದಲ ವರ್ಷದ ಪರೀಕ್ಷೆಯನ್ನು ಎದುರಿಸಿದ್ದು, ಅದರಲ್ಲಿ 2,47,407 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ವರ್ಷದಲ್ಲಿ 3,82,534 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 2,47,555 ವಿದ್ಯಾರ್ಥಿಗಳು ಮಾತ್ರ ಪಾಸ್​ ಆಗಿದ್ದಾರೆ. ಪರೀಕ್ಷಾ ಫಲಿತಾಂಶದಲ್ಲಿನ ಪ್ರಮಾದದ ತನಿಖೆಗಾಗಿ ಈಗಾಗಲೇ ಸಮಿತಿಯೊಂದನ್ನು ರಚಿಸಿದ್ದು, ಸಮಿತಿ ತನ್ನ ವರದಿಯನ್ನೂ ಕೂಡ ಸಲ್ಲಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….