ಸುದ್ದಿ

ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

100

ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಪ್ರದೀಪ್ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೃತ್ಯ ನಡೆದ ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದ್ದು, ತನ್ನ ಹೆಂಡತಿ ತನ್ನನ್ನು ಅನುಮಾನಿಸಿದ್ದಕ್ಕೆ ಈ ರೀತಿ ಮಾಡಿದ್ದೇನೆ ಎಂದು ಬರೆಯಲಾಗಿದೆ. ಇನ್ನೂ ಕೊಲ್ಲುವಾಗ ಮಕ್ಕಳು ಕಿರುಚಬಾರದು ಎಂದು ಮಕ್ಕಳ ಬಾಯಿಗೆ ಟೇಪ್ ಹಾಕಿ ಕೊಲೆ ಮಾಡಿದ್ದಾನೆ ಎಂದು ಘಜಿಯಾಬಾದ್‍ನ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ಎಲ್ಲಾ ಮೃತ ದೇಹಗಳು ಮನೆಯಲ್ಲಿ ಇದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಈ ಘಟನೆ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ