ಸುದ್ದಿ

ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ – ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು…!

157

ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.

ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ.

ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು. ಈ ವೇಳೆ ಮನೆ ಮಾಲೀಕ ಸೋಮಶೇಖರ್, ಗೀತಾ ಮತ್ತು ಬಿಂದು ಪೊಲೀಸರ ಮುಂದೆಯೇ ಮಂಜುಳಾ ಮತ್ತು ಪತಿ ಸುಬ್ರಮಣಿಗೆ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ಮಂಜುಳಾ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಡಿಯೋದಲ್ಲಿ ಏನಿದೆ? , ದೂರು ಕೊಡಲು ಪೊಲೀಸ್ ಠಾಣೆಗೆ ಹೋದಾಗ ನನ್ನ ಮಾಂಗಲ್ಯವನ್ನು ಕಿತ್ತುಕೊಂಡು ತುಂಬಾನೇ ಹಿಂಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಸೋಮಶೇಖರ್, ಗೀತಾ ಮತ್ತು ಬಿಂದು ಮೂವರೂ ನನಗೆ ಮತ್ತು ಪತಿಗೆ ಚೆನ್ನಾಗಿ ಹೊಡೆದಿದ್ದಾರೆ. ಆದರೆ ಪೊಲೀಸರು ಯಾಕೆ ಹೊಡೆಯುತ್ತಿದ್ದೀರಿ ಎಂದು ಕೂಡ ಕೇಳಿಲ್ಲ. ನಾನು ಪತಿಯನ್ನು ಆಸ್ಪತ್ರೆಗೆ ಕಳುಹಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಈ ಮೂವರು ಕಾರಣರಾಗಿದ್ದು ಅವರನ್ನು ಬಿಡಬೇಡಿ. ಬಡವರಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…