ಸುದ್ದಿ

ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

15

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ.

ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ತೆರೆಕಂಡಿದ್ದು ಮೊದಲ ದಿನ ಕನ್ನಡ ಭಾಷೆಯಿಂದ 10 ಕೋಟಿ  ರೂ.ಗೂ ಅಧಿಕ ಕಲೆಕ್ಷನ್ ಮಾಡಿರುವ ‘ಪೈಲ್ವಾನ್’ ಉಳಿದ ಉಳಿದ ಭಾಷೆಗಳಲ್ಲಿಯೂ ಭರ್ಜರಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

‘ಪೈಲ್ವಾನ್’ಗಳಿಕೆಯಲ್ಲಿ ದಾಖಲೆ ಬರೆದಿದೆ. ಚಿತ್ರತಂಡದಿಂದ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಸಿನಿ ಪಂಡಿತರಲೆಕ್ಕಾಚಾರದ ಪ್ರಕಾರ ‘ಪೈಲ್ವಾನ್’ ಫಸ್ಟ್ ಡೇ ಸುಮಾರು 15 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ