ಸುದ್ದಿ

18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

120

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ.

ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್ ಮಾಡುವ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಪ್ರಿಯಾ ಅವರು `ಪೈಲ್ವಾನ್’ ಸಿನಿಮಾ ನೋಡಿ, ಅದರಲ್ಲಿ ಸುದೀಪ್ ಮದುವೆ ಮನೆಗೆ ಮಾಸ್ ಆಗಿ ಎಂಟ್ರಿ ಕೊಡುತ್ತಾರೆ. ಆಗ ಮದುವೆ ಹುಡುಗಿಯಾಗಿ ನಾನು ಕೂರಬೇಕಿತ್ತು ಎಂದು ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಸುದೀಪ್ ಅವರು ವಿವಾಹ ವಾರ್ಷಿಕೋತ್ಸವ ಸಂಭ್ರಮ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಸುದೀಪ್ ತಮ್ಮ ಪತ್ನಿ ಪ್ರಿಯಾ ಜೊತೆಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಈ ದಂಪತಿಗೆ ಸಾನ್ವಿ ಎಂಬ ಮಗಳಿದ್ದಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ