ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.
ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್‍ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್‍ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.
ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್‍ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.