ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.
ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.
ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.
ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.