ಸುದ್ದಿ

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

By admin

April 09, 2019

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ ನಡೆಸಿದ್ದು, ಸದ್ಯದಲ್ಲೇ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ರಾಜಕೀಯ ನಾಯಕರು ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಒಂದು ವೇಳೆ ಸುಮಲತಾ ಅಂಬರೀಶ್ ಅವರು ಮಾಡಿರುವ ಆರೋಪ ನಿಜವಾಗಿದ್ದರೆ ಅದು ಕೀಳುಮಟ್ಟದ ರಾಜಕಾರಣ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.