ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು ಕೇಂದ್ರ ಸಚಿವ ಸ್ಥಾನವೂ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಸಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇನೆ. ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿರುವ ವಿಡಿಯೋ ನನ್ನ ಬಳಿಯಿದೆ. ಶೀಘ್ರದಲ್ಲಿಯೇ ಅದನ್ನು ಬಿಡುಗಡೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸುಮಲತಾರನ್ನು ಬೆಂಬಲಿಸಿ ಎಂದು ಹೇಳಿದ್ದರು. ಈ ಹೇಳಿಕೆ ಬಳಿಕವೂ ಸುಮಲತಾ ಅವರು ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಹರಿದಾಡಿದ್ದವು.
ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಬಂಡಾಯ ಕಾಂಗ್ರೆಸ್ ನಾಯಕರು ಸುಮಲತಾ ಪರ ಕೆಲಸ ಮಾಡುತ್ತಲೇ ಇದ್ದಾರೆ. ಇದರಿಂದ ಬೇಸತ್ತ ದಿನೇಶ್ ಗುಂಡೂರಾವ್ ಅವರೇ ಖುದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಸುಮಲತಾ ಅಂಬರೀಶ್ ಗೆದ್ದ ಮೇಲೆ ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಹಿಂದೆಯೇ ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ. ಗೆದ್ದರೆ ನನ್ನ ಕ್ಷೇತ್ರದ ಜನ ಯಾವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳುತ್ತಾರೆಯೋ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…