ಸುದ್ದಿ

ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

88

ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ ಮನಸ್ಸಿನಿಂದ ಹೇಳ್ತಿದ್ದಾರೆ.

ಜೆಡಿಎಸ್‍ ನಾಯಕರ ಬ್ಲಾಕ್‍ ಮೇಲ್‍ ನಿಂದ ಈ ರೀತಿ ಮಾಡ್ತಿದ್ದಾರೆ. ಮೈಸೂರಿನಲ್ಲಿ ಏನ್‍ ಆಗುತ್ತೋ ಎಂಬ ಭಯ ಅವರನ್ನು ಇಲ್ಲಿಗೆ ಪ್ರಚಾರಕ್ಕೆ ಬರುವಂತೆ ಮಾಡಿದೆ ಎಂದ್ರು.

ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸುಮಲತಾ, ಸೈನಿಕರ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಹೆಚ್‍ಡಿಕೆ, ಲಕ್ಷ್ಮೀ ಅಶ್ವಿನ್ ಗೌಡ ಅವರಿಗೆ ಮೋಸ ಮಾಡಿದ್ರು.

ಬರೀ ಕುಟುಂಬ ರಾಜಕಾರಣ ಮಾಡ್ತಿದ್ದಾರೆ. ಜಿಲ್ಲೆಯಲ್ಲಿರುವ ಮೂವರು ಸಚಿವರು ಮಾಡದ ಅಭಿವೃದ್ಧಿಯನ್ನು ಈಗ ಅವರು ಮಾಡ್ತಾರಂತೆ ಅಂತಾ ಹರಿಹಾಯ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…