inspirational

ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

134

ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ.

ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ ಅವರನ್ನು ನಮ್ಮಿಂದ ಶಾಶ್ವತವಾಗಿ ದೂರ ಮಾಡಿದೆ. ಅವರ ಹೃದಯ ಬ್ರಹ್ಮಾಂಡದಷ್ಟೇ ತುಂಬಾ ವಿಶಾಲವಾಗಿತ್ತು. ಜೀವನದಲ್ಲಿ ಅವರೊಂದಿಗೆ ನಾನು ಕೆಲವು ಹೆಜ್ಜೆಯನ್ನು ಹಾಕಿದ್ದಕ್ಕೆ ನನಗೆ ಹೆಮ್ಮೆ ಇದೆ” ಎಂದು ಪ್ರೀತಿಯಿಂದ ಅಂಬರೀಶ್ ಬಗ್ಗೆ ಬರೆದುಕೊಂಡಿದ್ದಾರೆ. ಜೊತೆಗೆ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿ ಮೂರು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, “ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ರೆಬೆಲ್‍ಸ್ಟಾರ್ ಅಂಬರೀಷ್ ಅವರ ಜನ್ಮ ಜಯಂತಿಯ ಪ್ರಯುಕ್ತ ಯಂಗ್ ಅಭಿಷೇಕ್ ಅಂಬರೀಷ್ ಅಭಿನಯದ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದೆ. ಇಂದು ಬೆಳಗ್ಗೆ 9.45ಕ್ಕೆ ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್‍ನಲ್ಲಿ ದುನಿಯಾ ಸೂರಿ ನಿರ್ದೇಶನದ, ಸುಧೀರ್ ಕೆ.ಎಂ ನಿರ್ಮಾಣದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಅಧಿಕೃತ ಫಸ್ಟ್ ಲುಕ್ ವಿಡಿಯೋ ರಿಲೀಸ್ ಆಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…