ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ.
- ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ.
- ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ ಬರುತ್ತದೆ.
- ಯಾರಾದರೂ ತಾಂಬೂಲ ಕೊಟ್ಟಾಗ ಮನೆಗೆ ತರದೆ ಎಲ್ಲಿಯಾದರೂ ಬಿಟ್ಟು ಬಂದರೆ. ನಿಮ್ಮ ಕಾರ್ಯಗಳು ತುಂಬಾ ನಿಧಾನವಾಗುತ್ತದೆ, ವಿವಾಹ ಕಾರ್ಯಗಳಿಗೆ ಅಡಚಣೆಯಾಗುತ್ತದೆ, ಶುಭ ಕಾರ್ಯ ನಿಧಾನವಾಗುತ್ತದೆ. ಮಕ್ಕಳ ಮಾನಸಿಕ ಬೆಳವಣಿಕೆ ಕಮ್ಮಿಯಾಗುತ್ತದೆ.
- ತಾಂಬೂಲ ಕೆಳಗೆ ಬಿದ್ದರೆ ನಿಮ್ಮ ಕೆಲಸಗಳು ಇನ್ನೇನು ಆಯಿತು ಅನ್ನೋ ಸಮಯದಲ್ಲಿ ಅರ್ಧಕ್ಕೇ ನಿಂತುಹೋಗುತ್ತದೆ.
- ತಾಂಬೂಲ ಕೊಡುವಾಗ ವೀಳ್ಯದೆಲೆ ಅಡಿಕೆ ಕೊಳೆತಿದ್ದರೆ, ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಮೊದಲು ತಂದು ದೇವರ ಮುಂದೆ ಇಟ್ಟು ನಮಸ್ಕರಿಸಿ, ಆನಂತರ ಸರಿಯಾದ ರೀತಿಯಲ್ಲಿ ಉಪಯೋಗಿಸಿ.