ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ.
ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ, ಅವರ ಆರೋಗ್ಯ ಕೂಡ ಚೆನ್ನಾಗಿಯೇ ಇದೆ.
ಛತ್ತೀಸ್‍ಗಢದ ಕೊರಿಯಾ ಜಿಲ್ಲೆಯ ಬರಾದಿಯಾ ಗ್ರಾಮದ ನಿವಾಸಿ ಪಿಲ್ಲಿ ದೇವಿ(44) ಕಳೆದ 30 ವರ್ಷಗಳಿಂದ ಕೇವಲ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ. ಪಿಲ್ಲಿ ದೇವಿ, 11 ವರ್ಷ ವಯಸ್ಸಿದ್ದಾಗ ಆಹಾರ ತ್ಯಜಿಸಿದ ಆಕೆ, ಅಂದಿನಿಂದ ಟೀ ಕುಡಿದೇ ಬದುಕುತ್ತಿದ್ದಾಳೆ, ಇಡೀ ಗ್ರಾಮದಲ್ಲಿ ಪಿಲ್ಲಿ ದೇವಿ ಚಾಯ್ ವಾಲಿ ಚಾಚಿ ಎಂದೇ ಪ್ರಸಿದ್ದಳಾಗಿದ್ದಾಳೆ.
ಆಕೆ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಪಾಟ್ನಾ ಶಾಲೆಯ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಹೋಗಿದ್ದಳು. ಆ ದಿನ ಮನೆಗೆ ವಾಪಸ್ ಬಂದಾಗಿನಿಂದ ಯಾವುದೇ ಆಹಾರ ಸೇವಿಸದಿರಲು ನಿರ್ಧರಿಸಿದಳು,ಅಂದಿನಿಂದ ಆಕೆ ಏನನ್ನೂ ಸೇವಿಸುತ್ತಿಲ್ಲ ಎಂದು ಆಕೆಯ ತಂದೆ ರತಿ ರಾಮ್ ಹೇಳಿದ್ದಾರೆ.
ತಮ್ಮ ಮಗಳು ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಒಂದು ದಿನ ಪಾಟ್ನಾ ಶಾಲೆಯ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಹೋಗಿದ್ದಳು. ಆ ದಿನ ಮನೆಗೆ ವಾಪಸ್ ಬಂದಾಗಿನಿಂದ ಆಕೆ ನೀರು ಮತ್ತು ಆಹಾರವನ್ನು ತಿನ್ನುವುದನ್ನು ಬಿಟ್ಟಳು. ಮೊದಲಿಗೆ ಟೀ ಜೊತೆ ಬಿಸ್ಕಟ್ ಮತ್ತು ಬ್ರೆಡ್ ತಿನ್ನುತ್ತಿದ್ದಳು, ಆದ್ರೆ ಕೆಲ ತಿಂಗಳ ನಂತರ ಬಿಸ್ಕಟ್ ಮತ್ತು ಬ್ರೆಡ್ ತಿನ್ನೋದನ್ನು ಬಿಟ್ಟಳು ಎಂದು ಮಹಿಳೆಯ ತಂದೆ ರತಿ ರಾಮ್ ಹೇಳಿದ್ದಾರೆ.
ಮೊದಲಿಗೆ ತಮ್ಮ ಮಗಳು ಟೀ ಜೊತೆ ಬಿಸ್ಕಿಟ್ಸ್ ಮತ್ತು ಬ್ರೆಡ್ ತಿನ್ನುತ್ತಿದ್ದಳು, ಕೆಲ ತಿಂಗಳ ನಂತರ ಅದನ್ನು ತಿನ್ನುವುದನ್ನು ಬಿಟ್ಟಳು, ನಂತರ ಆಕೆ ಯಾವುದಾದರೂ ರೋಗದಿಂದ ಬಳಲುತ್ತಿದ್ದಾಳೆಯೇ ಎಂಬ ಬಗ್ಗೆ ವೈದ್ಯರ ಬಳಿ ಪರೀಕ್ಷಿಸಿದೆವು, ಆದರೆ ಆಕೆಗೆ ಯಾವುದೇ ಕಾಯಿಲೆ ಇಲ್ಲ ಎಂದು ವೈದ್ಯರು ದೃಢ ಪಡಿಸಿದರು ಎಂದು ಆಕೆಯ ಸಹೋದರ ತಿಳಿಸಿದ್ದಾರೆ.
ಅಲ್ಲದೆ ಪಿಲ್ಲಿ ದೇವಿ ಮನೆಯಿಂದ ಹೊರ ಹೊಗುವುದು ಅಪರೂಪ, ಯಾವಾಗಲೂ ಶಿವಧ್ಯಾನದಲ್ಲಿ ಮುಳುಗಿರುತ್ತಾರೆ ಎಂದುರು. ಹಾಗೆಯೇ ಕೇವಲ ಟೀ ಕುಡಿದು ಮಾನವ 33 ವರ್ಷ ಬದುಕುವುದು ವೈಜ್ಞಾನಿಕವಾಗಿ ಅಸಾಧ್ಯ, ಆದ್ರೆ ಪಿಲ್ಲಿ ದೇವಿ ಬದುಕಿರೋದೇ ಒಂದು ಪವಾಡ ಎಂದು ಜಿಲ್ಲಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.