ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು ಮನೆಯಲ್ಲೇ ಪ್ರತಿಕ್ರಿಯೆ ನೀಡಲು ಮುಂದಾಗಿದ್ದರು. ಇದರಿಂದ ಸ್ವಲ್ಪ ಗರಂ ಆದ ತೇಜಸ್ವಿನಿ, ಪ್ರಬುದ್ಧರಾಗಿ ವರ್ತಿಸಿ. ಇಲ್ಲಿ ಮಾತಾಡೋದು ಬೇಡ. ಕ್ಯಾಮರಾ ಮುಂದೆ ಬೇಡ, ಏನ್ ಹೇಳ್ಬೇಕು ಅದನ್ನ ನಿಮಗೆ ಹೇಳ್ತೇನೆ ಎಂದು ಹೇಳಿದರು.

ಇದು ಒಬ್ಬರಿಗೊಬ್ಬರು ಚರ್ಚೆ ಮಾಡುವ ಸ್ಥಳ ಅಲ್ಲ. ಇದರಿಂದ ನೀವೇನೂ ಸಾಧನೆ ಮಾಡಲು ಆಗಲ್ಲ. ಹೀಗಾಗಿ ಈ ಸಮಯದಲ್ಲಿ ನಿಮ್ಮ ಪ್ರಬುದ್ಧತೆಯನ್ನು ಎಲ್ಲರ ಮುಂದೆ ತೋರಿಸಿ. ನಾವು ಒಂದು ಸಿದ್ಧಾಂತದ ಪರವಾಗಿದ್ದೇವೆ. ಹಾಗೆಯೇ ನರೇಂದ್ರ ಮೋದಿ ಮತ್ತು ದೇಶದ ಪರವಾಗಿದ್ದೇವೆ. ಸಪೂರ್ಣವಾಗಿ ಪ್ರಚಾರಕ್ಕೆ ಬೆಂಬಲಿಸುವುದಾಗಿ ಹೇಳಿದ್ರು.

ಇದೇ ವೇಳೆ ತೇಜಸ್ವಿ ಸೂರ್ಯ ಅವರು ಮನೆಯೊಳಗಡೆಯೇ ಭೋಲೋ ಭಾರತ್ ಮಾತಾಕಿ, ಅನಂತ್ ಕುಮಾರ್ ಜೀ ಕಿ ಜೈ ಅಂದ್ರು. ಈ ಸಂದರ್ಭದಲ್ಲಿ ಅನಂತ್ ಕುಮಾರ್ ಅಭಿಮಾನಿಗಳು ತೇಜಸ್ವಿ ಸೂರ್ಯ ಅವರಿಗೆ ದನಿಯಾಗಿ ಜೈಕಾರ ಕೂಗಿದ್ರು. ಆದರೆ ಅದರಲ್ಲೊಬ್ಬ ತೇಜಸ್ವಿ ಸೂರ್ಯ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…