ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ.
ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.
ಈ ಸಂದರ್ಭದಲ್ಲಿ ಆತ ಪತ್ರವೊಂದನ್ನು ಬರೆದಿಟ್ಟಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡು ರಾಜ್ಯಗಳಲ್ಲಿಯೂ ಪ್ರಾಮಾಣಿಕರಾಗಿರುವ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಆತ ಬರೆದಿಟ್ಟಿರುವುದಾಗಿ ಬಂಜಾರ ಹಿಲ್ಸ್ ಇನ್ಸ್ ಪೆಕ್ಟರ್ ಗೋವಿಂದ ರೆಡ್ಡಿ ಹೇಳಿದ್ದಾರೆ.
ಶ್ರೀನಗರ ಕಾಲೋನಿಯ ವೆಂಕಟೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂತರ ಮಹೇಶ್ ಓಸ್ಮಾನಿಯಾ ಆಸ್ಪತ್ರೆಗೆ ದೌಡಾಯಿಸಿದ್ದು, ಚಿಕಿತ್ಸೆ ಪಡೆದಿದ್ದಾನೆ. ಆತನ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
2009ರ ಚುನಾವಣೆ ಸಂದರ್ಭದಲ್ಲೂ ನಾಗೇಶ್ ಇದೇ ರೀತಿ ಮಾಡಿದ್ದ ಎನ್ನಲಾಗಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ . ರಾಜಶೇಖರ ರೆಡ್ಡಿ ಅವರ ನಿಷ್ಠಾವಂತ ಅಭಿಮಾನಿಯಾಗಿದ್ದು, ಅವರ ಗೆಲುವಿಗಾಗಿ ತುಂಡಿಸಿದ ನಾಲಿಗೆಯನ್ನು ತ್ಯಾಗ ಮಾಡಿರುವುದಾಗಿ ಹೇಳಿಕೆ ನೀಡಿದ್ದ. 2004ರ ಚುನಾವಣೆ ಸಂದರ್ಭದಲ್ಲೂ ಆತ ಇದೇ ರೀತಿಯಲ್ಲಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.ತೆಲಂಗಾಣದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…