ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ.
ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.
ಈ ಸಂದರ್ಭದಲ್ಲಿ ಆತ ಪತ್ರವೊಂದನ್ನು ಬರೆದಿಟ್ಟಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡು ರಾಜ್ಯಗಳಲ್ಲಿಯೂ ಪ್ರಾಮಾಣಿಕರಾಗಿರುವ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಆತ ಬರೆದಿಟ್ಟಿರುವುದಾಗಿ ಬಂಜಾರ ಹಿಲ್ಸ್ ಇನ್ಸ್ ಪೆಕ್ಟರ್ ಗೋವಿಂದ ರೆಡ್ಡಿ ಹೇಳಿದ್ದಾರೆ.
ಶ್ರೀನಗರ ಕಾಲೋನಿಯ ವೆಂಕಟೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂತರ ಮಹೇಶ್ ಓಸ್ಮಾನಿಯಾ ಆಸ್ಪತ್ರೆಗೆ ದೌಡಾಯಿಸಿದ್ದು, ಚಿಕಿತ್ಸೆ ಪಡೆದಿದ್ದಾನೆ. ಆತನ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
2009ರ ಚುನಾವಣೆ ಸಂದರ್ಭದಲ್ಲೂ ನಾಗೇಶ್ ಇದೇ ರೀತಿ ಮಾಡಿದ್ದ ಎನ್ನಲಾಗಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ . ರಾಜಶೇಖರ ರೆಡ್ಡಿ ಅವರ ನಿಷ್ಠಾವಂತ ಅಭಿಮಾನಿಯಾಗಿದ್ದು, ಅವರ ಗೆಲುವಿಗಾಗಿ ತುಂಡಿಸಿದ ನಾಲಿಗೆಯನ್ನು ತ್ಯಾಗ ಮಾಡಿರುವುದಾಗಿ ಹೇಳಿಕೆ ನೀಡಿದ್ದ. 2004ರ ಚುನಾವಣೆ ಸಂದರ್ಭದಲ್ಲೂ ಆತ ಇದೇ ರೀತಿಯಲ್ಲಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.ತೆಲಂಗಾಣದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.