ದೇಗುಲ ದರ್ಶನ

ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

By admin

January 21, 2020

ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ.

ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. 

ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಇಲಾಖೆಗೆ ಮನವಿ ಕೂಡ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೆ ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತಿಸಿದೆ.

ಮಹಿಳೆಯರಿಗೆ ಕುರ್ತಾ, ಸೀರೆ ಅಥವಾ ಸಲ್ವಾರ್ ಹಾಗೂ ಪುರುಷರಿಗೆ ಪಂಚೆ, ಶರ್ಟ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಮಂಗಳವಾರ ಬಹುತೇಕ ವಿಧಾನಸೌಧದಲ್ಲಿ ಸಚಿವರ ಸಭೆ ನಡೆಯಲಿದ್ದು, ತೀರ್ಮಾನ ತೆಗೆದುಕೊಳ್ಳಲಿದ್ದಾರೆ.