ಸುದ್ದಿ

ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

46

ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆಗಿದ್ದೇನು?:

ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.

ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…