ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ.

66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಮದುವೆಯಾಗಿದ್ದಾರೆ ಎನ್ನಲಾಗಿದೆ.

ವಜಿರಲೊಂಗ್ ಕಾರ್ನ್ ಅವರಿಗೆ ಈಗಾಗಲೇ 3 ಮದುವೆಯಾಗಿದ್ದು, 7 ಜನ ಮಕ್ಕಳಿದ್ದಾರೆ. ಆದರೆ ಮೂವರು ಪತ್ನಿಯರಿಗೂ ವಜಿರಲೊಂಗ್ ಕಾರ್ನ್ ಅವರಿಗೆ ವಿಚ್ಛೇದನ ನೀಡಿದ್ದು, 4ನೇ ಪತ್ನಿಯಾಗಿ ಅಂಗರಕ್ಷಕಿಯನ್ನು ಮದುವೆಯಾಗಿದ್ದಾರೆ.
2014 ರಲ್ಲಿ ಸುಥಿದಾ ಅವರು ರಾಜರ ಭದ್ರತಾ ಕಾರ್ಯಕ್ಕೆ ಅಧಿಕಾರಿಯಾಗಿ ಆಯ್ಕೆ ಆಗಿದ್ದರು. ಆ ಬಳಿಕ ಹಲವು ಭಾರೀ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರೂ ಈ ಬಗ್ಗೆ ಎಲ್ಲಿಯೂ ಮಾಹಿತಿ ಬಹಿರಂಗವಾಗಿರಲಿಲ್ಲ.

ಉಳಿದಂತೆ ಶನಿವಾರ ಬ್ಯಾಂಕಾಕ್ ನಲ್ಲಿ ಬೌದ್ಧ, ಬ್ರಾಹ್ಮಣ ಸಂಪ್ರದಾಯದ ಅನ್ವಯ ವಜಿರಲೊಂಗ್ ಕಾರ್ನ್ ಕಿಂಗ್ ರಾಮಘಿ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಬಳಿಕ ಅವರನ್ನು ರಾಜನಾಗಿ ಬೃಹತ್ ಮೆರವಣಿಗೆ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.