ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ ಸೇರಿಸಿದ್ದೇನೆ ಎಂದು ಹೇಳುವ ಮೂಲಕ ಶಿಲ್ಪಾ ಎಲ್ಲರ ಮನ ಗೆದ್ದಿದ್ದಾರೆ.

ಅಂಗನವಾಡಿ ಕೇಂದ್ರವೂ ತಮ್ಮ ಜಿಲ್ಲಾಧಿಕಾರಿ ಕಚೇರಿ ಬಳಿಯೇ ಇದ್ದು ಎಲ್ಲಾ ರೀತಿಯ ಸೌಕರ್ಯಗಳನ್ನು ಹೊಂದಿದೆ, ಅಲ್ಲಿನ ಶಿಕ್ಷಕಿಯರು ತುಂಬಾ ಸಕ್ರಿಯರಾಗಿದ್ದಾರೆ., ಅಂಗನಾಡಿಯಲ್ಲಿರುವ ಎಲ್ಲಾ ಸಿಬ್ಬಂದಿ ತರಬೇತಿ ಪಡೆದು ಮೂಲಭೂತ ಸೌಕರ್ಯಗಳು ಉತ್ತಮ ಗುಣಮಟ್ಟದಿಂದ ಕೂಡಿವೆ.

ತಿರುವನೇಲಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಸ್ಮಾರ್ಟ್ ಫೋನ್ ಹೊಂದಿವೆ, ಮಕ್ಕಳ ಎತ್ತರ ಮತ್ತು ತೂಕವನ್ನು ಅವರು ತಿಂದ ಆಹಾರದ ಪ್ರಮಾಣ ಕೂಡ ಅಳತೆ ಮಾಡಲಾಗುತ್ತದೆ, ಈ ಅಂಗನವಾಡಿಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಾವು ನಿರ್ಧರಿಸಿದ್ದೇವೆ, ಏಕೆಂದರೇ ಬಾಲ್ಯದಲ್ಲಿ ಮಕ್ಕಳ ಬೆಳವಣಿಗೆಗೆಯಲ್ಲಿ ಅಂಗನವಾಡಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಿಲ್ಪಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.