ಸುದ್ದಿ

99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

67

ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ.

ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ.

ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್ ನಲ್ಲಿರುವ ಗೂಗಲ್ ಕಚೇರಿಯ ಮುಂದೆ 99 ಮೊಬೈಲ್ ಗಳನ್ನು ಸಣ್ಣ ಗಾಡಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. 99 ಮೊಬೈಲ್ ಗಳಲ್ಲಿ ಜಿಪಿಎಸ್ ಆನ್ ಆಗಿದ್ದ ಕಾರಣ ಸಹಜವಾಗಿ ಗೂಗಲ್ ಕಚೇರಿಯ ಮುಂದೆ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ತೋರಿಸಿದೆ.

ಸೈಮನ್ ವೆಕರ್ಟ್ ತಂತ್ರಜ್ಞಾನವನ್ನು ನಾವು ಹೇಗೆ ಮೂರ್ಖರನ್ನಾಗಿ ಮಾಡಬಹುದು ಎಂದು ತೋರಿಸಲು ನಾನು ಈ ರೀತಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತಾನು ಸಣ್ಣ ಗಾಡಿಯಲ್ಲಿ ಮೊಬೈಲ್‍ಗಳನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಯೂ ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಈ ವಿಡಿಯೋಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಸೈಮನ್ ವೆಕರ್ಟ್ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು, ಬೇರೆ ಏನು ಕೆಲಸ ಇಲ್ಲದ ಈ ವ್ಯಕ್ತಿ ತುಂಬಾ ಫ್ರೀ ಇರಬೇಕು. ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದಾನೆ. ತಂತ್ರಜ್ಞಾನ ಇಂತವರಿಂದಲೇ ದುರುಪಯೋಗ ಆಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ