ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ.
ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ ಲೇಸಿ ಸೀ-ಬಾಡಿಸೋಟ್ನ್ನು ಅಯ್ಕೆ ಮಾಡಿದ್ದೆ. ತದನಂತರ ಅದನ್ನು ನನಗೆ ಕೊಟ್ಟು, ಹೇಗೆ ಕಾಣಿಸುತ್ತದೆಂದು ತೋರಿಸಲು ಆ ಬಟ್ಟೆ ಧರಿಸುವಂತೆ ಒತ್ತಾಯಿಸಿದರು. ಹೀಗಾಗಿ ನಾನು ಆ ಬಟ್ಟೆ ತೆಗೆದುಕೊಂಡು ಟ್ರಯಲ್ ರೂಂ ಗೆ ತೆರಳಿದೆ. ಅಲ್ಲಿಗೆ ಬಂದ ಟ್ರಂಪ್ ನನ್ನ ಮೇಲೆ ಸುಮಾರು 3 ನಿಮಿಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.
ನನ್ನ ಎರಡು ತೋಳುಗಳನ್ನು ಬಿಗಿಯಾಗಿ ಹಿಡಿದು ಗೋಡೆ ಕಡೆಗೆ ನನ್ನನ್ನು ತಳ್ಳಿದರು. ನನ್ನ ಒಳ ಉಡುಪಿಗೆ ಕೈ ಹಾಕಿ ಅದನ್ನು ಎಳೆದು ಲೈಂಗಿಕವಾಗಿ ಬಳಸಿಕೊಂಡರು. ನಾನು ಅವರನ್ನು ಬಲವಾಗಿ ತಳ್ಳಿ ಅಲ್ಲಿಂದ ಪರಾರಿಯಾದೆನು ಎಂದು ಆರೋಪಿಸಿ ತಮ್ಮ ನಿಯತಕಾಲಿಯಲ್ಲಿ ಬರೆದಿದ್ದಾರೆ.ಇದು ನಡೆದ 25 ವರ್ಷಗಳ ನಂತರ ಹೊರಬಂದಿರುವ ಕಾರಣ ಇದು ಶುದ್ಧ ಸುಳ್ಳು. ಅಧ್ಯಕ್ಷರನ್ನು ಕೆಟ್ಟವರೆಂದು ಬಿಂಬಿಸಲು ಈ ರೀತಿ ಮಾಡಿದ್ದಾರೆ ಶ್ವೇತಭವನದ ವಕ್ತಾರರೊಬ್ಬರು ಮಹಿಳೆಯ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್, ನಾನು ಈ ಮಹಿಳೆಯನ್ನೂ ಎಂದಿಗೂ ಭೇಟಿಯೇ ಮಾಡಿಲ್ಲ. ಅದಲ್ಲದೆ ಆಕೆ ತಮ್ಮ ನಿಯತಕಾಲಿಕೆಯಲ್ಲಿ ಇದೆಲ್ಲವನ್ನೂ ಬರೆದಿರುವುದು ಪುಸ್ತಕದ ಮಾರಾಟವನ್ನು ಹೆಚ್ಚಿಸಲು ಅಷ್ಟೇ. ಏಕೆ ಅವರ ಬಳಿ ಚಿತ್ರಗಳಿಲ್ಲವೇ, ಸಾಕ್ಷಿಗಳಿಲ್ಲವೆ ಏಕೆ ಅದೆಲ್ಲವನ್ನು ಬರವಣಿಗೆಯಲ್ಲಿ ಗುರುತಿಸಿಲ್ಲ. ಏಕೆಂದರೆ ಈ ಘಟನೆ ಸಂಭವಿಸಿಲ್ಲವೆಂಬುದು ಖಚಿತವಾಗಿದೆ. ನಮ್ಮ ಡೆಮಾಕ್ರಟಿಕ್ ಪಕ್ಷ ನಿಯತಕಾಲಿಕೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಹೊಂದಿರುವವರು ಆದಷ್ಟು ಬೇಗ ತಿಳಿಸಿ ಎಂದರು.
ಈ ಹಿಂದೆಯೂ ಸುಮಾರು 15ಕ್ಕೂ ಹೆಚ್ಚು ಮಹಿಳೆಯರು ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…