ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

ಇದರ ಪ್ರೋಮೋ ಇದೀಗ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಧಾಮೂರ್ತಿಯವರು ಭಾಗವಹಿಸಿರುವ ಕಾರ್ಯಕ್ರಮ ನವೆಂಬರ್ 29ರಂದು ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದರ ಜೊತೆಗೆ ಬಿಗ್ ಬಿ ಕೇಳುವ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೂ ಸುಧಾಮೂರ್ತಿಯವರು ಉತ್ತರಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಓದಿನಲ್ಲಿ ಮುಂದಿದ್ದ ನಾನು ಎಂಜಿನಿಯರಿಂಗ್ ಓದುವ ಬಯಕೆಯನ್ನು ಹೊಂದಿದ್ದೆ. 1968ರಲ್ಲಿ ಎಂಜಿನಿಯರಿಂಗ್ ಓದುವ ಹುಡುಗಿಯರೇ ಇರಲಿಲ್ಲ.

ಹೀಗಾಗಿ ಎಂಜಿನಿಯರಿಂಗ್ ಓದಿದರೆ ಯಾವ ಹುಡುಗನೂ ಸಿಗುವುದಿಲ್ಲ ಎಂಬ ಭಯ ನಮ್ಮ ಮನೆಯವರಲ್ಲಿತ್ತು. ಆದರೆ ಹೇಗೋ ಮನೆಯವರ ಮನವೊಲಿಸಿ ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿಕೊಂಡೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ಪ್ರೋಮೋದಲ್ಲಿ ಸುಧಾಮೂರ್ತಿಯವರು ಬಡವರಿಗೆ, ಹಳ್ಳಿಗಳಲ್ಲಿನ ಮಕ್ಕಳಿಗೆ, ನಿರ್ಗತಿಕರಿಗೆ ಮಾಡಿರುವ ಸಮಾಜಮುಖಿ ಕೆಲಸಗಳನ್ನು ಸಹ ತೋರಿಸಲಾಗಿದೆ. ಪ್ರೋಮೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಹಲವರು ಸುಧಾಮೂರ್ತಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…