ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ ಸಮಯದಲ್ಲಿ ಬಳ್ಳಾರಿ ಜನತೆಗೆ ಧನ್ಯವಾದ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.