ಸುದ್ದಿ

ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

65

ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ.

ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.

ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ ನಿರ್ಮಾಣವಾಗಲಿರುವ ಚಿತ್ರವನ್ನು ಬರೋಬ್ಬರಿ 7 ಭಾಷೆಗಳಲ್ಲಿ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ಉಪೇಂದ್ರ ಈ ಚಿತ್ರದಲ್ಲಿ ಎರಡು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 18 ರಂದು ಉಪೇಂದ್ರ ಹುಟ್ಟುಹಬ್ಬದ ದಿನ ಚಿತ್ರದ ಕುರಿತಾದ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ