ಆರೋಗ್ಯ

ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

232

ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ.

ಈ ಹಿಟ್ಟು ಮಾನವ ದೇಹಕ್ಕೆ ವಿಷಕಾರಿಯಾಗಿದ್ದು, ನೀವು ಇದನ್ನು ಪ್ರತಿದಿನ ಬಳಸಿದರೆ ಅದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಲಬದ್ಧತೆ, ಹೊಟ್ಟೆನೋವು  ಗೋಧಿ ಗಟ್ಟಿ ಧಾನ್ಯವಾಗಿದ್ದು, ಇದರ ಹಿಟ್ಟಿನಿಂದ ಮಾಡಿದ ಪದಾರ್ಥಗಳನ್ನು ಸೇವಿಸಿದಾಗ, ಅದು ಹೊಟ್ಟೆಯಲ್ಲಿ ನಿಧಾನವಾಗಿ ಜೀರ್ಣಿಸಿಕೊಳ್ಳಲು ಶುರು ಮಾಡುತ್ತದೆ. ಮಲಬದ್ಧತೆ ಇರುವವರಿಗಂತೂ ಇದನ್ನು ಜೀರ್ಣಿಸಿಕೊಳ್ಳವುದು ಇನ್ನು ಕಷ್ಟವಾಗುತ್ತದೆ. ಉಳಿಸಿಕೊಂಡ ಹಸಿ ಹಿಟ್ಟಿನಿಂದ ರೊಟ್ಟಿಗಳನ್ನು ಮಾಡಿಕೊಂಡು ತಿನ್ನುವುದರಿಂದ ಹೊಟ್ಟೆ ನೋವು, ಮಲಬದ್ಧತೆ ಮತ್ತು ಹೊಟ್ಟೆಯ ತೊಂದರೆ ಉಂಟಾಗುತ್ತದೆ.

ರೋಗ ನಿರೋಧಕ ಶಕ್ತಿ ದುರ್ಬಲವಾಗುತ್ತದೆ ವಿಜ್ಞಾನಿಗಳ ಪ್ರಕಾರ, ಉಳಿದ ಹಸಿ ಹಿಟ್ಟಿನಲ್ಲಿ ರೊಟ್ಟಿಗಳನ್ನು ಮಾಡಬಾರದು. ಅವರ ಪ್ರಕಾರ, ಹಿಟ್ಟನ್ನು ಕಲಸಿದ ನಂತರ, ಆದಷ್ಟು ಬೇಗ ಬಳಸಬೇಕು. ಏಕೆಂದರೆ ಒಂದು ಗಂಟೆಯ ನಂತರ ಅದರಲ್ಲಿ ರಾಸಾಯನಿಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹಿಟ್ಟಿನಲ್ಲಿ ಚಪಾತಿಗಳು ಅಥವಾ ಪರೋಟಗಳನ್ನು ಹಲವಾರು ದಿನಗಳವರೆಗೆ ನಿರಂತರವಾಗಿ ಸೇವಿಸಿದರೆ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುವುದು ಸಹಜ. ನೀವು ನಿಯಮಿತವಾಗಿ ಹಳೆಯ ಹಿಟ್ಟನ್ನು ಬಳಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಸಮತೋಲನ ಉಂಟಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ದುರ್ಬಲವಾಗುತ್ತಾ ಹೋಗುತ್ತದೆ.

ಹಿಟ್ಟನ್ನು ಹೇಗೆ ಬಳಸಬೇಕು?  ಕೆಲವರಿಗೆ ಮಾರುಕಟ್ಟೆಗಳು ದೂರವಾಗುವುದರಿಂದ ಹಿಟ್ಟನ್ನು ಸಂಗ್ರಹಿಸುವುದು ಸಹಜ. ಹೀಗೆ ಹಿಟ್ಟನ್ನು ಸಂಗ್ರಹ ಮಾಡುವಾಗ ಜಾಗರೂಕರಾಗಿ ಉಪಯೋಗಿಸಬೇಕು. ಈ ಹಿಟ್ಟನ್ನು ಸುಮಾರು 6 ತಿಂಗಳ ನಂತರ ಬಳಸಬಾರದು. ಸ್ವಚ್ಛವಾಗಿರುವ ಡಬ್ಬಿಯಲ್ಲಿ ಎತ್ತಿಡಬೇಕು. ನೀರಿನ ಕೈಯ್ಯಲ್ಲಿ ಬಳಸದೆ, ಒಣ ಕೈ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…