ಕ್ರೀಡೆ

ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

62

ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್ ಸಹ ಸಿಕ್ಕಂತೆ ಆಗುತ್ತದೆ ಎಂದು ಸೆಹ್ವಾಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕೆ.ಎಲ್.ರಾಹುಲ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ನಾಲ್ಕು ಬಾರಿ ವಿಫಲವಾದರೆ ತಂಡದ ಆಯ್ಕೆ ಸಮಿತಿ ಅವರನ್ನು ಬದಲಾಯಿಸುತ್ತದೆ. ಆದರೆ ಎಂ.ಎಸ್.ಧೋನಿ ಅವರ ವಿಚಾರದಲ್ಲಿ ಇಂತಹ ಯಾವುದೇ ಬದಲಾವಣೆ ಬರಲಿಲ್ಲ. ಆಟಗಾರರಿಗೆ ಸಮಯ ನೀಡದಿದ್ದರೆ ಅವರು ಹೇಗೆ ಬೆಳೆಯಲು ಹಾಗೂ ಕಲಿಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ನಾನು ಪ್ರಾರಂಭದ ಮೊದಲು ಮಿಡಲ್ ಆರ್ಡರ್ ನಲ್ಲಿ ಬ್ಯಾಟಿಂಗ್ ಮಾಡಲು ಬರುತ್ತಿದ್ದೆ. ಈ ವೇಳೆ ಅನೇಕ ತಪ್ಪುಗಳನ್ನು ಮಾಡಿದ್ದೇನೆ. ಇದರಿಂದಾಗಿ ತಂಡವು ಸಹ ಅನೇಕ ಬಾರಿ ಸೋಲನ್ನು ಎದುರಿಸಬೇಕಾಯಿತು. ಆದರೆ ಆಟಗಾರರು ಬೆಂಚ್ ಮೇಲೆ ಕುಳಿತು ದೊಡ್ಡವರಾಗಲು ಸಾಧ್ಯವಿಲ್ಲ. ಆಟಗಾರರಿಗೆ ಸಮಯ ನೀಡುವುದು ಮುಖ್ಯ ಎಂದು ತಿಳಿಸಿದ್ದಾರೆ.

virender sehwag

ಕೆ.ಎಲ್.ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ 47 ರನ್ ಮತ್ತು ಎರಡನೇ ಪಂದ್ಯದಲ್ಲಿ 5ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ 80ರನ್ ಗಳಿಸಿದರು. ಇದಲ್ಲದೆ ಎರಡನೇ ಪಂದ್ಯದಲ್ಲಿ ಅವರು ಆ್ಯರನ್ ಫಿಂಚ್ ಅವರನ್ನು ಉತ್ತಮ ಶೈಲಿಯಲ್ಲಿ ಸ್ಟಂಪ್ ಮಾಡಿದ್ದರು. ಇದರ ನಂತರ ರಾಹುಲ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸಿಸಲಾಯಿತು. ಮೂರನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಗಾಯಗೊಂಡ ನಂತರ ರಾಹುಲ್ ಆರಂಭಿಕ  ಬ್ಯಾಟ್ಸ್‌ಮನ್‌ ಆಗಿ ಮೈದಾಕ್ಕಿಳಿದು 19 ರನ್ ಗಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.