ಸಿನಿಮಾ, ಸುದ್ದಿ

ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

55

ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ ವಿಜಯ್​ ದೇವರಕೊಂಡ ಟಾಲಿವುಡ್​ ಬಡಾ ಸ್ಟಾರ್​ಗಳಿಗೆ ಕಾಂಪಿಟೇಶನ್​ ಕೊಡ್ತಿದ್ದಾರೆ.

ವಿಜಯ್ ಸಾಂಪ್ರದಾಯಿಕ ಉಡುಗೆ ತೊಟ್ಟು ತನ್ನ ಕುಟುಂಬಸ್ಥರ ಜೊತೆ ಹೊಸ ಮನೆಯಲ್ಲಿ ಕುಳತುಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಅವರು, “ಅಮ್ಮನ ಖುಷಿ, ಅಪ್ಪನ ಹೆಮ್ಮೆ ಹಾಗೂ ನಮ್ಮ ಹೊಸ ಮನೆ. ನಾವು ನಾಲ್ವರು ನಿಮ್ಮನ್ನು ತುಂಬಾ ಪ್ರೀತಿಸುತ್ತೇವೆ. ನೀವೆಲ್ಲರೂ ನನ್ನ ಜೀವನದ ಒಂದು ಭಾಗ” ಎಂದು ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ವಿಜಯ್, “ನಾನು ಇಷ್ಟು ದೊಡ್ಡ ಮನೆಯನ್ನು ಖರೀದಿಸಿದ್ದು, ನನಗೆ ಇದು ಭಯಪಡಿಸುತ್ತೆ. ನಾನು ಸುರಕ್ಷಿತವಾಗಿರಬೇಕು ಎಂದರೆ ಅಮ್ಮ ಏನಾದರೂ ಮಾಡಬೇಕು. ಇದು ಮನೆಯನ್ನು ಮಾಡಿ” ಎಂದು ಫನ್ನಿಯಾಗಿ ಬರೆದುಕೊಂಡಿದ್ದಾರೆ.

ವಿಜಯ್ ನಿರ್ದೇಶಕ ಕ್ರಾಂತಿ ಮಾದವ್ ನಿರ್ದೇಶನದ ‘ವಲ್ಡ್ ಫೇಮಸ್ ಲವರ್’ ಚಿತ್ರದಲ್ಲಿ ನಟಿಸಿದ್ದು, ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದಾದ ಬಳಿಕ ಅವರು ನಿರ್ದೇಶಕ ಆನಂದ್ ಅಣ್ಣಾಮಲೈ ನಿರ್ದೇಶನದ ‘ಹೀರೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ತೆಲುಗು ಹಾಗೂ ತಮಿಳಿನಲ್ಲಿ ಬಿಡುಗಡೆ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ರಾಜಕೀಯ

    ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

    ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…