ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು ಒಂದು ಎಕರೆ ಜಾಗದಲ್ಲಿ ಐದು ಲಕ್ಷ ರೂ. ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವೀರಣ್ಣ ಅವರು ಅಪ್ಪಟ ಸಾವಯವ ಕೃಷಿಕ. 20 ವರ್ಷಗಳಿಂದ ಸುತ್ತಮುತ್ತಲ ಹಳ್ಳಿಗರಿಗೆ ಇವ್ರೇ ಕೃಷಿ ಸಂಪನ್ಮೂಲ ವ್ಯಕ್ತಿಯಾಗಿ ಸಲಹೆ ನೀಡುತ್ತಿದ್ದಾರೆ. ಸಮೀಪದ ಕಾಡಲ್ಲಿ ಅನಾವಶ್ಯಕವಾಗಿ ನೀರು ಹರಿದು ಹೋಗುತ್ತಿದ್ದ ನೀರನ್ನು ಗೋಕಟ್ಟೆಗೆ ತಿರುಗಿಸಿದ್ದಾರೆ. ಈಗ ಗೋಕಟ್ಟೆ ನೀರಿನಿಂದ ತುಂಬಿದ್ದು, ಜಾನುವಾರುಗಳಲ್ಲದೇ ಕಾಡುಪ್ರಾಣಿಗಳ ದಾಹವೂ ನೀಗುತ್ತಿದೆ. ಗೋಕಟ್ಟೆ ನಿರ್ಮಿಸಲು ಇವರು ಬೇರೆಯವರಿಂದ ಚಿಕ್ಕಾಸು ಕೇಳಿರಲಿಲ್ಲ.
ಆದರೆ ಸ್ವಾಮೀಜಿಯೊಬ್ಬರು ಸ್ವಂತ ಹಣದಲ್ಲಿ ಕೆರೆ ನಿರ್ಮಿಸಿದ್ರೆ ಸಾರ್ವಜನಿಕರದ್ದು ಅನ್ನಿಸಿಕೊಳ್ಳಲ್ಲ. ಹಾಗಾಗಿ ಜನರು ನೀಡುವ ಹಣ ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಸ್ವಾಮೀಜಿಗಳ ಸಲಹೆ ಮೇರೆಗೆ ಜನ ನೀಡಿದಷ್ಟು ಹಣ ಪಡೆದುಕೊಂಡಿದ್ದರು. ಈ ಕಾಲದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡೋರು ಕಡಿಮೆ. ದನಕರುಗಳಿಗಾಗಿ ಗೋಕಟ್ಟೆ ನಿರ್ಮಿಸಿದ ವೀರಣ್ಣ ನಿಜಕ್ಕೂ ಇತರರಿಗೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.