ಸುದ್ದಿ

ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

36

ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ
ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಇಂತಹ ಜನಸ್ನೇಹಿ ಪ್ರಯತ್ನ ಮಾಡಿದೆ.

ಪೂರ್ವ ನಿಗದಿಯಂತೆ ಪೊಲೀಸರ ತಂಡ ಸಂಜೆಯ ವೇಳೆಗೆ ಅರೆ ಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿತು. ಗ್ರಾಮ ಪಂಚಾಯಿತಿಯ ಸದಸ್ಯ ಸೇರಿ ದಂತೆ ಮುಖಂಡರೊಂದಿಗೆ ಪೊಲೀಸರು ಮಾತುಕತೆ ನಡೆಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಾತ್ರಿ 8.00 ಕ್ಕೆ ಆರಂಭವಾದ ಸಭೆ ಸುಮಾರು  12 ಗಂಟೆವರೆಗೂ ನಡೆಯಿತು. 09 ಗಂಟೆಗೆ ಎಸ್‌ಪಿ ರವಿ ಕೂಡ ಗ್ರಾಮಕ್ಕೆ ಧಾವಿಸಿ ಸಭೆಯಲ್ಲಿ  ಪಾಲ್ಗೊಂಡಿದ್ದರು.

ಪೊಲೀಸ್ ಸೇವೆಗಳು ಜನರಿಗೆ ಹತ್ತಿರವಾಗಲೂ ಹೊಸ ಪ್ರಯೋಗ ಹಾಗೂ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದ ಮೂಡಿಸುವ ಜೊತೆಗೆ ಜನರಿಗೆ ಪೊಲೀಸರ ವ್ಯವಸ್ಥೆ ಹತ್ತಿರವಾಗುವ ನಿಟ್ಟಿನಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಪೊಲೀಸರೊಂದಿಗೆ ಗ್ರಾಮಸ್ಥರು, ನೆಲಮಂಗಲ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಭಾಗಿಯಾಗಿದ್ದಾರೆ. ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 200 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಸ್ ನಿಲ್ದಾಣ, ಸಾರಿಗೆ ಬಸ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ನಾಗರಿಕರು ಪೊಲೀಸರನ್ನು ಕೋರಿದರು ಶಾಲೆಯ ಆವರಣದಲ್ಲಿಯೇ ಪೊಲೀಸರು ರಾತ್ರಿ ಮಲಗುವ ಮುನ್ನ ಗ್ರಾಮದ ಎಲ್ಲ ಬೀದಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪೊಲೀಸ್ ಸೇವೆಗಳು ಜನರಿಗೆ ಹತ್ತಿರವಾಗಲೂ ಹೊಸ ಪ್ರಯೋಗ ಹಾಗೂ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದ ಮೂಡಿಸುವ ಜೊತೆಗೆ ಜನರಿಗೆ ಪೊಲೀಸರ ವ್ಯವಸ್ಥೆ ಹತ್ತಿರವಾಗುವ ನಿಟ್ಟಿನಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಪೊಲೀಸರೊಂದಿಗೆ ಗ್ರಾಮಸ್ಥರು, ನೆಲಮಂಗಲ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಭಾಗಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…