ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು.

ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ.
ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು ಬ್ರ್ಯಾಂಡೆಂಡ್ ಬರೋಬ್ಬರಿ 5 ರಿಂದ 8 ಸಾವಿರ ಬೆಲೆ ಬಾಳುವಂತದ್ದಾಗಿದೆ.

ಶೂಗಳು, ಗಾಗಲ್ಸ್ ಹಾಕಿಕೊಂಡು ಹೀರೋ ರೇಂಜೆ ಗೆ ಬಿಲ್ಡಪ್ ಕೊಟ್ಟು ಐಶಾರಾಮಿ ಜೀವನ ಮಾಡುತ್ತಿದ್ದ. ಬಂಧಿತನನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಆತನ ಗ್ಯಾಂಗ್ ನ ಇತರ ಸದಸ್ಯರನ್ನು ಬಂಧಿಸಿಲು ಬಲೆ ಬೀಸಿದ್ದಾರೆ.

ಆರೋಪಿ ಬಂಧನದಿಂದ ನಟ ವಿನೋದ್ ರಾಜ್ ಸಂತಸ ವ್ಯಕ್ತಪಡಿಸಿದ್ದು, ಮುಂದೆ ಈ ಖದೀಮರ ಗ್ಯಾಂಗ್ ಯಾರಿಗೂ ದ್ರೋಹ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ವಿನೋದ್ ರಾಜ್ ಕಳೆದುಕೊಂಡಿರುವ ಹಣದ ರಿಕವರಿ ಬಗ್ಗೆ ಇನ್ನುತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.