ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.
‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.
ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.
ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.