ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.

ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು ಸರಬರಾಜು ಪೈಪುಗಳ ದುರಸ್ಥಿ-ಬದಲಾವಣೆ ಕಾಮಗಾರಿಗಳು ಮತ್ತು ಅತ್ಯವಶ್ಯಕತೆಯಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಹಾಗೂ ಪಂಪು ಮೋಟಾರ್ ಅಳವಡಿಸುವ ಕಾಮಗಾರಿಗಳನ್ನು ಮಾತ್ರ ಈ ಅನುದಾನದಡಿ ಕೈಗೆತ್ತಿಕೊಳ್ಳಲು ಹಾಗೂ ಅನುಮೋದನೆ ನೀಡಿರುವ ಅನುದಾನವನ್ನು ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶಗಳಿಗೆ ಬಳಸಬಹುದಾಗಿದೆ.

ಇತರೆ ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರು ಕಾಮಗಾರಿಗಳಿಗೆ ಅವಶ್ಯಕವಿರುವ ಪಂಪು, ಮೋಟಾರ್, ಪೈಪ್ಲೈನ್ ಮತ್ತು ಇತರೆ ಸಲಕರಣೆಗಳ ಸಂಗ್ರಹಣೆಯನ್ನು ನಿಯಮಾನುಸಾರ ಕೆಟಿಪಿಪಿ ಕಾಯಿದೆ 1999 ಮತ್ತು ನಿಯಮಗಳು 2000 ರನ್ವಯ ಇ-ಪ್ರಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಕೈಗೆತ್ತಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

40 ಕೋಟಿ ರೂ. ಬಿಡುಗಡೆ ಮಾಡಲಾದ ಅನುದಾನವನ್ನು ಜಿಲ್ಲಾಧಿಕಾರಿಗಳು ತಮ್ಮ ಖಾತೆಯಲ್ಲಿ ಅನವಶ್ಯಕವಾಗಿ ಜಮಾಗೊಳಿಸಬಾರದು. ಖಜಾನೆಯಿಂದ ಹಣ ಪಡೆದು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಆದ್ಯತೆ ಮೇರೆಗೆ ಬಳಸಬೇಕು. ಹಾಗೂ ಅನುದಾನ ಬಳಕೆ ಸಂಬಂಧ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಬಳಕೆ ಪ್ರಮಾಣ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಿ, ಅನುದಾನ ಬಳಕೆ ಬಗ್ಗೆ ಖಚಿತಪಡಿಸಬೇಕು ಎಂದು ಆದೇಶಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.