ಸುದ್ದಿ

ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

41

ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ.

ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು 3500ಕ್ಕೆ ಇಳಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಅಬಕಾರಿ ಸಚಿವ ನಾರಾಯಣಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಂಧ್ರಾದ್ಯಂತ ಮದ್ಯವನ್ನು ನಿಷೇಧಿಸಲು ಸರ್ಕಾರವು ಕ್ರಮ ಕೈಗೊಂಡಿದ್ದು ಅಲ್ಲಲ್ಲಿ ಅಕ್ರಮವಾಗಿ 2872 ವೈನ್‍ಶಾಪ್‍ಗಳನ್ನು ಸ್ಥಾಪನೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಅವುಗಳ ಮೇಲೆ ದಾಳಿ ನಡೆಸಿ 2928 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…