ಸುದ್ದಿ

ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

66

ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. 

ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ ವಿಫಲರಾಗುತ್ತಿದ್ದರು. ಹೀಗೆ ಹಲವು ತಿಂಗಳು ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಬಾಲಕೃಷ್ಣ, ಒಂದು ದಿನ ತನ್ನ ಪರಿಚಯಸ್ಥರಿಗೆ ಮೆಸೇಜ್ ಮಾಡಿದ್ದಾನೆ. ತನಗೆ ಮದುವೆಯಾಗಬೇಕು, ಹುಡುಗಿ ಹುಡುಕಿ ಎಂದು ಸಂದೇಶದಲ್ಲಿ ತಿಳಿಸಿದ್ದನು. ಇತ್ತ ಗುರುವಾರ ಉತ್ತರಪ್ರದೇಶದ ಬಿಜೋರಿ ಗ್ರಾಮಕ್ಕೆ ಬಂದು ಭೇಟಿಯಾಗುವಂತೆ ಬಾಲಕೃಷ್ಣ, ಮಾಧವಿ ಅಗ್ನಿಹೋತ್ರಿಯವರನ್ನು ಆಹ್ವಾನಿಸಿದ್ದಾನೆ. ಹಾಗೆಯೇ ಭೇಟಿಗೆ ಬಂದ ಮಾಧವಿ, ಆರೋಪಿ ತನ್ನನ್ನು ಭೇಟಿಯಾಗಲು ಬರುತ್ತಿದ್ದಂತೆಯೇ ತಂಡಕ್ಕೆ ಸೂಚನೆ ನೀಡಿದರು. ಹಾಗೆಯೇ ತಂಡ ಆತನನ್ನು ಅರೆಸ್ಟ್ ಮಾಡಿತು. ಶುಕ್ರವಾರ ಪೊಲಿಸರು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.