ಸುದ್ದಿ

ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

886


ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ ಮನೆಯ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.

 ಒಂದು ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರು ಮಾತ್ರ ಇರುವಂತೆ ಸಾಫ್ಟ್ ವೇರ್ ರಚಿಸಿ ಐಡಿ ಕಾರ್ಡ್ ವಿತರಿಸಲು ತಿಳಿಸಲಾಗಿದೆ.ಪ್ರತಿ ಸ್ತ್ರೀ ಶಕ್ತಿ ಗುಂಪಿಗೆ ಸುತ್ತುನಿಧಿ 5000 ರೂ. ಸ್ವಸಹಾಯ ಗುಂಪುಗಳಿಗೆ 25,000 ರೂ. ವರೆಗೂ ನೀಡಲಾಗುವುದು. ರಾಜ್ಯದಲ್ಲಿ 1.54 ಲಕ್ಷ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಂದ 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ.

ಇದುವರೆಗೂ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ. ಈ ಕುರಿತಾಗಿ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಸ್ತ್ರೀ ಶಕ್ತಿ ಯೋಜನೆ ಬಲಗೊಳಿಸಲು ವಿಮಾನ, ರೈಲು, ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…