ಸುದ್ದಿ

ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

190

ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ.

ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರಾದ ಮುನಿಪ್ರಸಾದ್ ದಂಪತಿಯಿಂದ ದೂರು ದಾಖಲಿಸಲಾಗಿದೆ. ಮನೆ ಖಾಲಿ ಮಾಡುವ ವೇಳೆ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ ಎನ್ನಲಾಗಿದೆ.

2 ತಿಂಗಳ ಹಿಂದೆಯೇ ಮನೆ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಹಾಸನದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದರಿಂದ ಕಾಲಾವಕಾಶ ನೀಡಬೇಕು ಎಂದು ಯಶ್ ಅವರ ತಾಯಿ ಮನವಿ ಮಾಡಿದ್ದು, ಮೇ 31 ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿತ್ತು. ಆದರೆ, ಮೇ 31 ರಂದು ಮನೆ ಖಾಲಿ ಮಾಡದ ಯಶ್ ಕುಟುಂಬ ಜೂನ್ 7 ರಂದು ಮನೆ ಖಾಲಿ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಮನೆಯ ಮಾಲೀಕರು ಆರೋಪಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ