ಸಿನಿಮಾ

ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

343

ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ.

ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಯಶ್ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಅಂಬರೀಶ್ ಅವರು ನಿಧನರಾದ ಹಿನ್ನೆಲೆಯಲ್ಲಿ ತಾವು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದರು.

ಯಶ್ ಅವರು ತಂದೆಯಾದ ಬಳಿಕ ಇದು ಅವರ ಮೊದಲನೇ ಹುಟ್ಟುಹಬ್ಬವಾಗಿದ್ದು, ಭಾನುವಾರ ಯಶ್ ಟ್ವಿಟ್ಟರಿನಲ್ಲಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ, ಈ ವರ್ಷ ಜನ್ಮದಿನ ಆಚರಿಸುತ್ತಿಲ್ಲ. ಅಭಿಮಾನಿಗಳು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ