ಸಿನಿಮಾ

ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

168

ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ.

ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದನು.

ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ರವಿ ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣವೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.

ತಮ್ಮ ಅಭಿಮಾನಿ ಆತ್ಮಹತ್ಯೆಗೆತ್ನಿಸಿದ್ದರ ಕುರಿತ ಮಾಹಿತಿ ತಿಳಿದ ನಟ ಯಶ್, ಮಂಗಳವಾರದಂದು ಆಸ್ಪತ್ರೆಗೆ ತೆರಳಿ ರವಿ ಅವರ ಆರೋಗ್ಯ ವಿಚಾರಿಸಿ, ರವಿಯವರ ಕುಟುಂಬದವರೊಂದಿಗೆ ಮಾತನಾಡಿದ್ದರು. ಇದೀಗ ರವಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಸುದ್ದಿ

    ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…