ಸಿನಿಮಾ

ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

By admin

January 04, 2019

ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ.

ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ.

ಯಶ್ ಅವರು ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಪ್ರತ್ಯೇಕ ಕೊಠಡಿಯನ್ನು ಹೊಂದಿದ್ದಾರೆ. ಐಟಿ ಅಧಿಕಾರಿಗಳು ಹೋಟೆಲ್ ನಲ್ಲಿ ಮ್ಯಾನೇಜರ್ ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು, ಅವರ ಕೊಠಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಕಾಯುತ್ತಿದ್ದ ಕಾರಣ ಯಶ್ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಹೋಟೆಲ್ ನಲ್ಲಿ ತನಿಖೆ ಮುಗಿದ ಬಳಿಕ ಅವರು ಕತ್ರಿಗುಪ್ಪೆಯ ನಿವಾಸಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.