ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ.

ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ ಹೆಸರು ಮಾಡಬೇಕು ಎಂಬ ಕಾರಣದಿಂದ ಸಮಸ್ತ ಕನ್ನಡ ಚಿತ್ರ ರಸಿಕರೂ ಒಗ್ಗಟ್ಟಾಗಿ ಕೆಜಿಎಫ್ ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ. ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ.

ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.
ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕೆಜಿಎಫ್ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…